Advertisement
ವೆದರ್ ಮಿರರ್

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

Share

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆ ಇದೀಗ ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸೂಚನೆಗಳು ಸ್ಪಷ್ಟವಾಗುತ್ತಿವೆ. ಏ. 29ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣಗಳು ಕಾಣಿಸುತ್ತಿವೆ.

ಕರಾವಳಿ ಭಾಗ:

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಹೆಚ್ಚಿನ ತೇವಾಂಶದಿಂದ ಉಷ್ಣತೆ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಹೊತ್ತಿನಲ್ಲಿ ಮೋಡದ ವಾತಾವರಣ ಇದ್ದು, ಸಂಜೆ ವೇಳೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹಾಗೂ ಉತ್ತರ ಕನ್ನಡದ ಬೆಳಗಾವಿ, ಧಾರವಾಡಕ್ಕೆ ಹೊಂದಿಕೊಂಡ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಂಭವವಿದೆ.
ಗಾಳಿಯ ಒತ್ತಡ ಹಾಗೂ ಅಧಿಕ ತಾಪಮಾನದಿಂದ ಕರಾವಳಿಯ ಉಳಿದ ಪ್ರದೇಶಗಳಲ್ಲೂ ಮಳೆಯ ಸಾಧ್ಯತೆ ಇದೆ. ವಿಶೇಷವಾಗಿ ಏ. 29ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು ಪ್ರದೇಶ:

ಕೊಡಗು ಜಿಲ್ಲೆಯ ಕೆಲ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಗಡಿಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಎ.29ರಿಂದ ಮಲೆನಾಡು ಪ್ರದೇಶಗಳಲ್ಲಿ ಮಳೆ ಹೆಚ್ಚು ಆಗುವ ಲಕ್ಷಣಗಳು ಗೋಚರಿಸುತ್ತಿವೆ.

ಉತ್ತರ ಒಳನಾಡು

ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದಲ್ಲಿ ಮಾತ್ರ ಮಳೆಯ ಸಾಧ್ಯತೆ ಇದೆ. ಈ ಭಾಗದಲ್ಲಿ ಮಳೆಯ ಚಟುವಟಿಕೆ ಮುಂದುವರಿಯುವ ಸೂಚನೆಗಳಿವೆ.

ದಕ್ಷಿಣ ಒಳನಾಡು

ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಧಿಕ ತಾಪಮಾನ ಮುಂದುವರಿಯಲಿದೆ. ಆದರೆ ಏಪ್ರಿಲ್ 29ರಿಂದ ಇಲ್ಲಿ ಸಹ ಗುಡುಗು ಸಹಿತ ಮಳೆಯ ಆರಂಭವಾಗುವ ಸಾಧ್ಯತೆ ಇದೆ.

Karnataka is expected to witness increased rainfall activity starting April 29. Coastal and Malnad regions may receive thunder showers, while interior regions will gradually see rainfall after continued heat. Weather conditions indicate a shift due to rising temperature and pressure changes.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

11 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago