ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?

August 6, 2026
3:42 PM
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್‌ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ. ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಎರಡು ದಿನ ಮಳೆ ಮುಂದುವರಿಯಬಹುದು.

07.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ: ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ನಡುವೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಉಳಿದ ಭಾಗಗಳಿಗಿಂತ ಸ್ವಲ್ಪ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದರೂ, ನಿನ್ನೆಗಿಂತ ಮಳೆಯ ತೀವ್ರತೆ ಕಡಿಮೆ ಇರಬಹುದು. ಪ್ರಸ್ತುತ ಹವಾಮಾನ ಮಾದರಿಯಂತೆ, ಆಗಸ್ಟ್‌ 10ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕ್ರಮೇಣ ಇಳಿಮುಖವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಮಲೆನಾಡು: ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಘಟ್ಟದ ಪ್ರದೇಶಗಳಲ್ಲಿ ಒಂದೆರಡು ಕಡೆ ತುಸು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್‌ 10ರಿಂದ ಮಲೆನಾಡಿನಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯಪುರ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನಲ್ಲಿ ಇನ್ನೂ ಎರಡು ದಿನಗಳ ಕಾಲ ಇದೇ ರೀತಿಯ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು: ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸೇರಿ), ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಮಳೆಯ ಸ್ವರೂಪ ಹೀಗೇಕೆ? :  ಈ ಬಾರಿ ಮುಂಗಾರು ಅವಧಿಯಲ್ಲಿ ಮೇಲ್ಸ್ತರದ ಗಾಳಿಯ ಸಂಚಾರ ದುರ್ಬಲವಾಗಿದ್ದು, ಮಧ್ಯಮ ಸ್ತರದ ಗಾಳಿಯ ಹರಿವು ಹೆಚ್ಚು ಪ್ರಬಲವಾಗಿದೆ. ಇದರಿಂದಾಗಿ ಪಶ್ಚಿಮ ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ದಕ್ಷಿಣ ಜಪಾನ್‌ ಭಾಗದಲ್ಲಿರುವ ಪ್ರಬಲ ಚಂಡಮಾರುತವೂ ಮಧ್ಯಮ ಸ್ತರದ ವಾಯುಮಂಡಲದ ಚಲನೆ ಮೇಲೆ ಪರಿಣಾಮ ಬೀರುತ್ತಿರುವುದಾಗಿ ಹವಾಮಾನ ವಿಶ್ಲೇಷಣೆ ಸೂಚಿಸುತ್ತದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rain is expected to continue intermittently across Karnataka’s coastal, Malnad, and interior regions today. Coastal and Malnad districts are likely to witness a gradual reduction in rainfall from August 10, while parts of North Interior Karnataka may continue receiving rain for another two days. The current rainfall pattern is influenced by weaker upper-level winds, stronger mid-level circulation, and the impact of a powerful typhoon near southern Japan.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror