Advertisement
ಸುದ್ದಿಗಳು

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

Share

ರಾಜ್ಯದ ವಿವಿಧ ಭಾಗಗಳಲ್ಲಿ  ಮಳೆಯಾಗಿದ್ದು, ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಕರಾವಳಿ ಕರ್ನಾಟಕದ ಹಲವೆಡೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ. ಹೊನ್ನಾವರನಲ್ಲಿ 6 ಸೆಂ.ಮೀ, ಸುಳ್ಯದಲ್ಲಿ 4 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳ್ತಂಗಡಿ, ಕೊಟ್ಟಿಗೆಹಾರ, ಕೃಷ್ಣರಾಜಸಾಗರ, ಕುಂದಾಪುರ ಹಾಗೂ ಮಂಗಳೂರುಗಳಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ, ಬ್ರಹ್ಮಾವರ, ಧರ್ಮಸ್ಥಳ, ಹೊನ್ನಾಳಿ, ಜಯಪುರ ಸೇರಿದಂತೆ ಹಲವು ಕಡೆಗಳಲ್ಲಿ 2 ಸೆಂ.ಮೀ ಮಳೆಯಾಗಿದೆ ಎಂದು ಇಲಾಖೆ ವರದಿ ಹೇಳಿದೆ.

ತಾಪಮಾನ ವಿವರ :  ಕಲಬುರಗಿನಲ್ಲಿ ಗರಿಷ್ಠ 38.4°C ತಾಪಮಾನ ದಾಖಲಾಗಿದ್ದು, ದಾವಣಗೆರೆಯಲ್ಲಿ ಕನಿಷ್ಠ 17°C ತಾಪಮಾನ ದಾಖಲಾಗಿದೆ. ಕರಾವಳಿಯ ಕೆಲವೆಡೆ ಗರಿಷ್ಠ ತಾಪಮಾನದಲ್ಲಿ 1 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರು ಹವಾಮಾನ (ಮುಂದಿನ 24 ಗಂಟೆ) : ಬೆಂಗಳೂರು ಮತ್ತು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಹಗುರ ಮಳೆ ಸಾಧ್ಯತೆ  ಗರಿಷ್ಠ ತಾಪಮಾನ: 35°C – ಕನಿಷ್ಠ ತಾಪಮಾನ: 21°C  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Several parts of Karnataka received rainfall today, especially in coastal and Malnad regions. Bengaluru is expected to witness light rain in the next 24 hours, mainly during evening or night. While some districts will continue to receive rain, others may experience dry weather.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

2 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

2 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

2 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

13 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

21 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago