Advertisement
ವೆದರ್ ಮಿರರ್

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

Share

ಕರ್ನಾಟಕದಲ್ಲಿ ಮುಂಗಾರು ಮಳೆಯ ಚಟುವಟಿಕೆ ಮುಂದುವರಿದಿದ್ದರೂ, ಅರಬ್ಬಿ ಸಮುದ್ರದ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆ ಹಾಗೂ ಮೇಲ್ಮಟ್ಟದ ವಾತಾವರಣದ ಬದಲಾವಣೆಗಳಿಂದ ಮುಂಗಾರು ಪ್ರಸ್ತುತ ದುರ್ಬಲಗೊಂಡಿರುವ ಲಕ್ಷಣಗಳು ಕಂಡುಬರುತ್ತಿವೆ. 10.06.2026 ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ವಿವಿಧ ಭಾಗಗಳಲ್ಲಿ ಸಾಮಾನ್ಯದಿಂದ ಉತ್ತಮ ಮಳೆಯ ಸಾಧ್ಯತೆ ಇದ್ದು, ಜೂನ್ ಮಧ್ಯಭಾಗದ ನಂತರ ಮಳೆ ಪ್ರಮಾಣದಲ್ಲಿ ಇಳಿಕೆ ಕಾಣುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಸಾಮಾನ್ಯ ಮಳೆ ಮುಂದುವರಿಕೆ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಪ್ರದೇಶಗಳಲ್ಲಿ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದ್ದು, ಒಳಭಾಗಗಳಲ್ಲಿ ದಿನದ ವೇಳೆ 2-3 ಬಾರಿ ಸಾಮಾನ್ಯ ಮಳೆಯಾಗಬಹುದು. ಆದರೆ ಜೂನ್ 15ರ ನಂತರ ಮಳೆ ಚಟುವಟಿಕೆ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.

Advertisement

ಮಲೆನಾಡಿನಲ್ಲಿ ಹಾಸನಕ್ಕೆ ಹೆಚ್ಚು ಮಳೆ :  ಮಲೆನಾಡು ಭಾಗದಲ್ಲಿ ಹಾಸನ ಜಿಲ್ಲೆಯ ಹೆಚ್ಚಿನ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿಯೂ ಜೂನ್ 16ರಿಂದ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡಿನಲ್ಲಿ ಚದುರಿದ ಮಳೆ : ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರ, ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗಳ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಹಾಗೂ ರಾಯಚೂರು, ಯಾದಗಿರಿ ಜಿಲ್ಲೆಗಳ ಆಂಧ್ರ ಗಡಿ ಭಾಗಗಳ ಸುತ್ತಮುತ್ತ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೂನ್ 16ರವರೆಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement

ದಕ್ಷಿಣ ಒಳನಾಡಿನಲ್ಲಿ ಮೋಡ-ಮಳೆ ವಾತಾವರಣ : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 13ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಮುಂಗಾರು ದುರ್ಬಲವಾಗಲು ಕಾರಣವೇನು? : ಹವಾಮಾನ  ಮುನ್ಸೂಚನೆ ಪ್ರಕಾರ ಅರಬ್ಬಿ ಸಮುದ್ರದ ಮಧ್ಯಮ ಸ್ತರದಲ್ಲಿ ಗಾಳಿಯ ತಿರುಗುವಿಕೆ ಮುಂದುವರಿದಿರುವುದು ಮುಂಗಾರು ದುರ್ಬಲಗೊಳ್ಳಲು ಪ್ರಮುಖ ಕಾರಣವಾಗಿದೆ. ಜೊತೆಗೆ ಮೇಲ್ಸ್ತರದಲ್ಲಿ ಆಸ್ಟ್ರೇಲಿಯಾ ಕಡೆಯಿಂದ ಬೀಸುವ ಮಾರುತಗಳು ದುರ್ಬಲಗೊಂಡಿದ್ದು, ಸೋಮಾಲಿ ಜೆಟ್ ಸ್ಟ್ರೀಮ್ ಪ್ರಬಲಗೊಂಡಿರುವುದು ಮಳೆಯ ಹಂಚಿಕೆಯಲ್ಲಿ ವ್ಯತ್ಯಾಸ ಉಂಟುಮಾಡುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

Karnataka is likely to witness scattered rainfall across coastal, Malnad, North Interior and South Interior regions on June 10. Coastal and Malnad districts may receive better rainfall, while interior regions are expected to get isolated showers. Weather indicators suggest the southwest monsoon has weakened temporarily, and rainfall activity may reduce in many parts of the state after June 13–16.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

2 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago