Advertisement
ವೆದರ್ ಮಿರರ್

ಹವಾಮಾನ ವರದಿ | 15-05-2026 | ಮೇ 19ರವರೆಗೆ ಕರ್ನಾಟಕದಲ್ಲಿ ಗುಡುಗು-ಮಳೆ ಮುಂದುವರಿಕೆ – ಮುಂಗಾರು ಪ್ರವೇಶ ಮತ್ತೆ ವಿಳಂಬವಾಗುವ ಸೂಚನೆ

Share

ಕರ್ನಾಟಕದ ವಿವಿಧ ಭಾಗಗಳಲ್ಲಿ ಮೇ 17.05.2026ರ ಬೆಳಿಗ್ಗೆ 8 ಗಂಟೆಯವರೆಗೆ ಗುಡುಗು ಸಹಿತ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮಳೆಯ ಚಟುವಟಿಕೆ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿವೆ.

ಕರಾವಳಿ ಭಾಗ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಿಶೇಷವಾಗಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಮೇ 19ರವರೆಗೆ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಮಲೆನಾಡು ಭಾಗ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಮೇ 19ರವರೆಗೆ ಮಳೆ ಮುಂದುವರಿಯುವ ಸೂಚನೆಗಳಿವೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಕೊಪ್ಪಳ, ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಸಂಜೆ ವೇಳೆ ಸಾಮಾನ್ಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವೆಡೆ ಮಾತ್ರ ಮಳೆಯ ಪ್ರಮಾಣ ಹೆಚ್ಚಿರಬಹುದು. ಮೇ 17ರ ನಂತರ ಉತ್ತರ ಒಳನಾಡಿನ ಭಾಗಗಳಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು: ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಸಾಧ್ಯತೆ ಇದೆ. ಮೇ 19ರವರೆಗೆ ಈ ಭಾಗಗಳಲ್ಲಿಯೂ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ.

ಮುಂಗಾರು ಕುರಿತು ಮಹತ್ವದ ಮಾಹಿತಿ : ಮುಂಗಾರು ಈಗಾಗಲೇ ಅಂಡಮಾನ್ ದ್ವೀಪ ಪ್ರದೇಶವನ್ನು ತಲುಪಿದರೂ, ಮೇ 17ರಿಂದ ಹಿಂದೂ ಮಹಾಸಾಗರದ ಮೂಲಕ ಸಾಗಿಬರುವ ಮುಂಗಾರು ಮಾರುತಗಳು ದುರ್ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಇದರಿಂದ ಕರ್ನಾಟಕಕ್ಕೆ ನೈಋತ್ಯ ಮುಂಗಾರು ನಿಗದಿತ ಸಮಯಕ್ಕಿಂತ ತಡವಾಗಿ ಪ್ರವೇಶಿಸುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Thunderstorms and scattered rainfall are likely to continue across Karnataka till May 19, especially in coastal, Malnad, and south interior districts. Meanwhile, weakening monsoon winds over the Indian Ocean may delay the onset of the southwest monsoon over Karnataka.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

2 hours ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

9 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

10 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

15 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

15 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

24 hours ago