ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

May 1, 2026
2:16 PM
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ 5 ಅಥವಾ 6ರಿಂದ ಮಳೆ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ.

02.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಚಟುವಟಿಕೆ ಅಲ್ಪ ಪ್ರಮಾಣದಲ್ಲಿ ಮುಂದುವರಿದಿದ್ದು, ಕೆಲವು ಭಾಗಗಳಲ್ಲಿ ಮಾತ್ರ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮುಂದಿನ ಕೆಲವು ದಿನಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಭಾಗ: ಕಳೆದ ಎರಡು ದಿನಗಳಿಂದ ಮುನ್ಸೂಚನೆ ಇದ್ದರೂ ಕರಾವಳಿ ಜಿಲ್ಲೆಗಳಲ್ಲಿ ನಿರೀಕ್ಷಿತ ಮಟ್ಟದ ಮಳೆಯಾಗಿಲ್ಲ. ಇಂದೂ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಮಧ್ಯಾಹ್ನದ ನಂತರ ಮತ್ತು ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡಾವೃತ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಪ್ರಸ್ತುತ ಪರಿಸ್ಥಿತಿಯಂತೆ ಮೇ 2ರಿಂದ ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು ಭಾಗ:  ಕೊಡಗು ಜಿಲ್ಲೆಯ ಹೆಚ್ಚಿನ ಪ್ರದೇಶಗಳಲ್ಲಿ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಸಂಜೆ ವೇಳೆಯಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ತುಸು ಮಳೆಯಾಗಬಹುದು. ಮಲೆನಾಡಿನಲ್ಲಿ ಮೇ 2ರಿಂದ ಮಳೆಯ ಪ್ರಮಾಣ ಕುಗ್ಗುವ ಸಾಧ್ಯತೆ ಇದ್ದು, ಮೇ 5 ಅಥವಾ 6ರಿಂದ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಮೇ 6ರ ನಂತರ ಮಾತ್ರ ಮಳೆಯ ಚಟುವಟಿಕೆ ಪುನಃ ಆರಂಭವಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು: ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಮೇ 2ರಿಂದ ಈ ಭಾಗದಲ್ಲಿಯೂ ಮಳೆಯ ಪ್ರಮಾಣ ತಗ್ಗುವ ಸಾಧ್ಯತೆಗಳಿವೆ.

ಒಟ್ಟಾರೆ, ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಮೇ ಮೊದಲ ವಾರದ ಅಂತ್ಯದ ವೇಳೆಗೆ ಮತ್ತೆ ಮಳೆ ಚುರುಕಾಗುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ


Karnataka is expected to see reduced rainfall activity from May 2 for a few days across coastal, Malnad, and interior regions. While isolated thunderstorms may occur in some areas, overall rainfall will remain low. Rain activity is likely to pick up again around May 5 or 6.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror