ಬೆಂಗಳೂರು, ದಕ್ಷಿಣ ಒಳನಾಡು, ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 11 ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದ್ದಾರೆ.
ಬೆಂಗಳೂರು ನಗರ, ಸಿಂದಗಿ, ಬಾದಾಮಿ, ಆಳಂದ, ಚಿಕ್ಕಮಗಳೂರು, ಹುಕ್ಕೇರಿ, ಚಿಂತಾಮಣಿ, ಕಲಬುರಗಿ, ಬಿಳಗಿ, ಗೋಕಾಕ, ಕೋಲಾರ, ದೇವನಹಳ್ಳಿ, ಟಿ ನರಸೀಪುರದಲ್ಲಿ ಮಳೆಯಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿ ಸಮುದ್ರತೀರದಲ್ಲಿ ಕಾಣಿಸಿಕೊಂಡಿರುವ ಚಂಡಮಾರುತ ಮೋಚಾದಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೇ 12ರವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಕಲಬುರಗಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…