ಮುಂದಿನ 48 ಗಂಟೆಗಳಲ್ಲಿ ಕೆಲವೆಡೆ ಭಾರಿ ಮಳೆ ಸಾಧ್ಯತೆ | ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ |ಎಲ್ಲೋ ಅಲರ್ಟ್​ ಘೋಷಣೆ |

May 30, 2023
11:35 AM

ಮುಂಗಾರು ಮಳೆ ಪ್ರವೇಶಕ್ಕೆ ಇನ್ನು ನಾಲ್ಕು ದಿನ ಬಾಕಿ ಇರುವಾಗಲೇ ಮಳೆಯ ಆರ್ಭಟ ಬಹುತೇಕ ಜಿಲ್ಲೆಗಳಲ್ಲಿ ಆರಂಭವಾಗಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ.ಬಾಳೆಹೊನ್ನೂರು, ಕಣಬರ್ಗಿ, ಸವಣೂರು, ಶ್ರೀಮಂಗಲ, ಗೋಣಿಕೊಪ್ಪಲು, ಹಾವೇರಿ, ಬೆಳಗಾವಿ ನಗರ, ಪೊನ್ನಂಪೇಟೆ, ಮೂಡಿಗೆರೆಯಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror