ಮುಂಗಾರು ಮಳೆ ಪ್ರವೇಶಕ್ಕೆ ಇನ್ನು ನಾಲ್ಕು ದಿನ ಬಾಕಿ ಇರುವಾಗಲೇ ಮಳೆಯ ಆರ್ಭಟ ಬಹುತೇಕ ಜಿಲ್ಲೆಗಳಲ್ಲಿ ಆರಂಭವಾಗಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ.ಬಾಳೆಹೊನ್ನೂರು, ಕಣಬರ್ಗಿ, ಸವಣೂರು, ಶ್ರೀಮಂಗಲ, ಗೋಣಿಕೊಪ್ಪಲು, ಹಾವೇರಿ, ಬೆಳಗಾವಿ ನಗರ, ಪೊನ್ನಂಪೇಟೆ, ಮೂಡಿಗೆರೆಯಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…