ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಹುಣಸೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ರಾಮನಗರ, ಮಾಲೂರು, ಹೊಸಕೋಟೆ, ಕನಕಪುರ, ರಾಯಚೂರು, ಸರಗೂರು, ಪರಶುರಾಂಪುರ, ಕೃಷ್ಣರಾಜಸಾಗರ, ಸೈದಾಪುರ, ಹಾಸನ, ಕುಣಿಗಲ್, ಕೆಐಎಎಲ್, ಖಜೂರಿ, ತಿರುಮಲ, ಚಾಮರಾಜನಗರ, ಕೃಷ್ಣರಾಜಪೇಟೆ, ಬೀದರ್, ಗೋಣಿಕೊಪ್ಪಲು, ಹರದನಹಳ್ಳಿ, ಶ್ರೀರಂಗಪಟ್ಟಣ, ಚಿಕ್ಕನಹಳ್ಳಿ, ಬೆಳ್ಳೂರು, ಮೈಸೂರಿನಲ್ಲಿ ಮಳೆಯಾಗಲಿದೆ.
ಕಲಬುರಗಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೋಚಾ ಚಂಡಮಾರುತದ ಸೃಷ್ಟಿ ಮತ್ತು ನಂತರ ಅದರ ಪ್ರಭಾವ ತೀವ್ರಗೊಂಡಿದ್ದು, ವ್ಯಾಪಕವಾದ ಗುಡುಗು ಸಹಿತ ಮಳೆಗೆ ಕಾರಣವಾಗಲಿದೆ. ಮತದಾನ ಸಾಮಗ್ರಿಗಳೊಂದಿಗೆ ಇವಿಎಂಗಳು ಮತ್ತು ವಿವಿಪ್ಯಾಟ್ ಯಂತ್ರಗಳ ಸಾಗಣೆ ಮತ್ತು ಚಲನೆಯ ಮೇಲೆ ಪರಿಣಾಮ ಬೀರಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹವಾಮಾನ ತಜ್ಞರ ಪ್ರಕಾರ, ಆಗ್ನೇಯ ಬಂಗಾಳದಲ್ಲಿ ಶೀಘ್ರದಲ್ಲೇ ಚಂಡಮಾರುತದ ಪರಿಚಲನೆ ರಚನೆಯಾಗುವ ಸಾಧ್ಯತೆ ಇದೆ. ಇದರ ಪ್ರಭಾವದಿಂದ ಮೇ 7ರ ಸುಮಾರಿಗೆ ಇದೇ ಪ್ರದೇಶದಲ್ಲಿ ಅಪಾರ ಮಳೆಯಾಗುವ ಸಾಧ್ಯತೆ ಇದೆ. ಇದು ಮೇ 8 ರ ಸುಮಾರಿಗೆ ಇದು ಇನ್ನಷ್ಟು ಬಲಗೊಳ್ಳಲಿದೆ.
ಏಜೆನ್ಸಿ ಪ್ರಕಾರ, ತಾಪಮಾನ ಏರಿಕೆಯ ಹೊರತಾಗಿಯೂ, ಮುಂದಿನ ವಾರದವರೆಗೆ ಈ ರಾಜ್ಯಗಳಲ್ಲಿ ಶಾಖದ ಅಲೆಯು ಕಡಿಮೆ ಇರಲಿದೆ. ಮೇ ತಿಂಗಳ ಎರಡನೇ ವಾರದಿಂದ ಹವಾಮಾನವು ಸಂಪೂರ್ಣವಾಗಿ ಬದಲಾಗುತ್ತದೆ. ಜನರು ಆಗಾಗ ಬಿಸಿಲಿನ ತಾಪವನ್ನು ಎದುರಿಸಬೇಕಾಗುತ್ತದೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…