12.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಜಿಲ್ಲೆಯಾದ್ಯಂತ ಉತ್ತಮ, ದಕ್ಷಿಣ ಕನ್ನಡ ಸಾಮಾನ್ಯ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬಾಗಲಕೋಟೆ, ಗದಗ, ಕೊಪ್ಪಳ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…