ಹಾವೇರಿ, ದಾವಣಗೆರೆ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿ | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸೂಚನೆ ನೀಡಿದ ಹವಾಮಾನ ಇಲಾಖೆ

October 13, 2024
10:17 AM

ಹಾವೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ 47 ಮನೆಗಳಿಗೆ ಹಾನಿ ಸಂಭವಿಸಿದೆ. ಜಿಲ್ಲೆಯ    ಸವಣೂರು ತಾಲೂಕಿನ ಕಳಸೂರಿನಲ್ಲಿ ಸುರಿದ ಮಳೆಗೆ ವರದಾ ನದಿಗೆ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಯಾಗಿದೆ.  ಜಿಲ್ಲೆಯಲ್ಲಿ ಹರಿಯುವ ತುಂಗಭದ್ರಾ, ವರದಾ, ಕುಮಧ್ವತಿ ನದಿಗಳು ಹಾಗೂ ಹಳ್ಳಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಶೇಂಗಾ, ಸೋಯಾಬಿನ್, ಮೆಕ್ಕೆಜೋಳ, ಹತ್ತಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿ ಸಂಭವಿಸಿದೆ.  ಮಳೆಯಿಂದ ಹಾವೇರಿಯ ಹಳೇ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement
Advertisement
Advertisement

ದಾವಣಗೆರೆ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಿದ್ದು, ಕೆರೆ, ಕಟ್ಟೆ, ಚೆಕ್ ಡ್ಯಾಂಗಳು ತುಂಬಿವೆ. ನ್ಯಾಮತಿ, ಬಸವಾಪಟ್ಟಣ, ಚನ್ನಗಿರಿ ಸೇರಿದಂತೆ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗಿದೆ, ಭತ್ತ ಮತ್ತು ಕೊಯ್ಲಿಗೆ ಬಂದಿದ್ದ ಮೆಕ್ಕೆಜೋಳದ ಬೆಳೆ ಹಾನಿ ಸಂಭವಿಸಿದೆ.

Advertisement

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ದಿನದಿಂದ ದಿನಕ್ಕೆ ಜೋರಾಗಿದ್ದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 13ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 13ರವರೆಗೆ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಗೆ ಅಪ್ಪಳಿಸಲು ಸಿದ್ಧವಾದ “ಡಾನಾ ಚಂಡಮಾರುತ ” | ಒಡಿಶಾ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹೈಎಲರ್ಟ್‌ |
October 23, 2024
9:58 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಇನ್ನು 6 ದಿನಗಳ ಕಾಲ ಧಾರಾಕಾರ ಮಳೆ | 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮಾಹಿತಿ |
October 23, 2024
7:30 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |
October 23, 2024
12:05 PM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |
October 23, 2024
10:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror