ವಾಯುಭಾರ ಕುಸಿತದ ಪರಿಣಾಮ | ಬೆಂಗಳೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಬೆಂಗಳೂರಿನಲ್ಲಿ ಭಾರೀ ಮಳೆ | ಅ.19 ರವರೆಗೆ ಬೆಂಗಳೂರಿಗೆ ಆರೆಂಜ್‌ ಅಲರ್ಟ್‌ |

October 16, 2024
6:42 AM
ಬೆಂಗಳೂರಿನ ಕೆಲವು ಕಡೆ ಈಗ ಮಳೆ ಕಡಿಮೆಯಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ರಸ್ತೆಯಲ್ಲಿ ನೀರು ನಿಂತಿದ್ದು, ಹಲವೆಡೆ ಟ್ರಾಫಿಕ್‌ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.   ಬೆಂಗಳೂರು ನಗರದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯಲಿದ್ದು,  ಅ.19 ರವರೆಗೆ ಎಲ್ಲೋ ಅಲರ್ಟ್‌  ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲೆಗಳಿಗೆ ಅ.16 ರಂದು ರಜೆ ಘೋಷಿಸಲಾಗಿದೆ. …..ಮುಂದೆ ಓದಿ….

Advertisement

ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿಯೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.  ಮೆಜೆಸ್ಟಿಕ್, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಕೆ.ಆರ್.ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ, ಹಲಸೂರು ಸೇರಿದಂತೆ ಸುತ್ತಮುತ್ತ ವ್ಯಾಪಕ ಮಳೆಯಾಗುತ್ತಿದೆ. ನಗರದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆ ಸುರಿಯಲಿದೆ. ಮಳೆ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಅ 16 ರಂದು ಬೆಂಗಳೂರಿನ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡುವಂತೆ ಸೂಚನೆ ನೀಡಲಾಗಿದೆ.

The city of Bangalore is currently facing heavy rainfall due to a depression in the Bay of Bengal. As a result, water has accumulated on the roads, leading to traffic congestion and difficulties for motorists. The Meteorological Department has forecasted that the rain is expected to continue for the next three days in Bangalore, with a weather alert in place until August 19th.

 

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group