ಕೇರಳಕ್ಕೆ ನಿನ್ನೆ ಮುಂಗಾರು ಪ್ರವೇಶ ಮಾಡಬೇಕಿತ್ತು. ಆದರೆ ಮುಂಗಾರು ಮಳೆ ವಿಳಂಬವಾಗಿದೆ. ಇನ್ನು ಕೆಲವು ದಿನ ಮುಂದೆ ಹೋಗುವ ಲಕ್ಷಣ ಗೋಚರಿಸುತ್ತಿದೆ. ಆದರೆ ಮುಂಗಾರು ಪೂರ್ವ ಮಳೆ ಕೆಲ ಜಿಲ್ಲೆಗಳಲ್ಲಿ ಸುರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜೂನ್ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…