ಹಾವೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ 47 ಮನೆಗಳಿಗೆ ಹಾನಿ ಸಂಭವಿಸಿದೆ. ಜಿಲ್ಲೆಯ ಸವಣೂರು ತಾಲೂಕಿನ ಕಳಸೂರಿನಲ್ಲಿ ಸುರಿದ ಮಳೆಗೆ ವರದಾ ನದಿಗೆ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಯಾಗಿದೆ. ಜಿಲ್ಲೆಯಲ್ಲಿ ಹರಿಯುವ ತುಂಗಭದ್ರಾ, ವರದಾ, ಕುಮಧ್ವತಿ ನದಿಗಳು ಹಾಗೂ ಹಳ್ಳಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಶೇಂಗಾ, ಸೋಯಾಬಿನ್, ಮೆಕ್ಕೆಜೋಳ, ಹತ್ತಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿ ಸಂಭವಿಸಿದೆ. ಮಳೆಯಿಂದ ಹಾವೇರಿಯ ಹಳೇ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಾವಣಗೆರೆ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಿದ್ದು, ಕೆರೆ, ಕಟ್ಟೆ, ಚೆಕ್ ಡ್ಯಾಂಗಳು ತುಂಬಿವೆ. ನ್ಯಾಮತಿ, ಬಸವಾಪಟ್ಟಣ, ಚನ್ನಗಿರಿ ಸೇರಿದಂತೆ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗಿದೆ, ಭತ್ತ ಮತ್ತು ಕೊಯ್ಲಿಗೆ ಬಂದಿದ್ದ ಮೆಕ್ಕೆಜೋಳದ ಬೆಳೆ ಹಾನಿ ಸಂಭವಿಸಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ದಿನದಿಂದ ದಿನಕ್ಕೆ ಜೋರಾಗಿದ್ದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 13ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 13ರವರೆಗೆ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…