Advertisement
ಸುದ್ದಿಗಳು

ರಾಜ್ಯದ 4370 ಹಳ್ಳಿಗಳಲ್ಲಿ ಸ್ಮಶಾನದ ಕೊರತೆ….! |

Share

ರಾಜ್ಯದಾದ್ಯಂತ 4370 ಹಳ್ಳಿಗಳು ಸ್ಮಶಾನ ಭೂಮಿಯನ್ನು ಹೊಂದಿಲ್ಲ. ಆದುದರಿಂದ ರಾಜ್ಯ ಸರ್ಕಾರವು ಈಗ ಈ ಉದ್ದೇಶಕ್ಕಾಗಿ ಭೂಮಿಯನ್ನು ಸಂಗ್ರಹಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ಮಾರ್ಚ್ ಅಂತ್ಯದ ವೇಳೆಗೆ ಅದನ್ನು ಅಂತಿಮಗೊಳಿಸುವ ನಿರೀಕ್ಷೆಯನ್ನು ಹೊಂದಿದೆ.

Advertisement
Advertisement
Advertisement
Advertisement

ಇತ್ತಿಚೆಗೆ ನಡೆದ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ರಾಜ್ಯಾದ್ಯಂತ ಹಲವು ಗ್ರಾಮಗಳಲ್ಲಿ ಜಾಗದ ಕೊರತೆ, ಸ್ಮಶಾನದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ತದನಂತರ ಒಟ್ಟು‌ 29,438 ಹಳ್ಳಿಗಳಲ್ಲಿ 4370 ಹಳ್ಳಿಗಳು ಸ್ಮಶಾನದ ಭೂಮಿಯನ್ನು ಹೊಂದಿಲ್ಲ ಎಂಬುದಾಗಿ ವರದಿಯಾಗಿದೆ. ಇವುಗಳಲ್ಲಿ ಹೆಚ್ಚಿನ ಗ್ರಾಮಗಳು ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಹಾಸನ, ಚಿತ್ರದುರ್ಗ, ರಾಯಚೂರು ಮತ್ತು ಕೆಲವು ಬಾಗಲಕೋಟೆ, ಕಲಬುರಗಿ, ಯಾದಗಿರಿ, ಗದಗ ಮತ್ತು ಕೊಪ್ಪಳದಲ್ಲಿದೆ ಎಂದು ವರದಿಯಾಗಿದೆ.

Advertisement

ದಕ್ಷಿಣ ಕನ್ನಡದ ನಾಲ್ಕು, ಚಿಕ್ಕಬಳ್ಳಾಪುರದ ಆರು ಮತ್ತು ಬೆಂಗಳೂರು ಗಾಮಾಂತರ ಜಿಲ್ಲೆಯ ಎಂಟು ಗ್ರಾಮಗಳಿಗೆ  ಸ್ಮಶಾನ ಭೂಮಿ ಇಲ್ಲ. ಮಾತ್ರವಲ್ಲದೆ ಮಲೆನಾಡು ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಗ್ರಾಮಸ್ಥರು ಅರಣ್ಯ ಪ್ರದೇಶಗಳನ್ನು ಸ್ಮಶಾನ ಭೂಮಿಯಾಗಿ ಬಳಸುತ್ತಿದ್ದಾರೆ. ಈ ಸ್ಥಳಗಳಲ್ಲಿ ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರಿಸುವಂತೆ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದು ಪರ್ಯಾಯ ಜಮೀನು ನೀಡಲಾಗುವುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

8 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

8 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

8 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago