ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

October 15, 2026
10:10 AM
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ 2.04 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದ್ದು, ಕಳೆದ ವರ್ಷದ ಇದೇ ಅವಧಿಗಿಂತ ಹೆಚ್ಚಳವಾಗಿದೆ. ರಾಯಚೂರು ಜಿಲ್ಲೆ ಮೊದಲ ಸ್ಥಾನ ಪಡೆದಿದ್ದು, ಈ ವರ್ಷ 87,164 ಹೊಸ ಜಾಬ್ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ನಾಟಕದಲ್ಲಿ ಜುಲೈ 1 ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ 2 ಕೋಟಿ 4 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

Advertisement

ಕಳೆದ ವರ್ಷ ಇದೇ ಅವಧಿಯಲ್ಲಿ 1 ಕೋಟಿ 71 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿತ್ತು. ಈ ಬಾರಿ ಎಲ್‌ನಿನೋ ಪ್ರಭಾವದಿಂದ ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಬಡವರು, ದಲಿತರು, ವಂಚಿತ ವರ್ಗಗಳು ಹಾಗೂ ಭೂರಹಿತ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯಲ್ಲಿ ರಾಯಚೂರು ಜಿಲ್ಲೆಗೆ ಮೊದಲ ಸ್ಥಾನ :  ರಾಜ್ಯದ ಜಿಲ್ಲಾವಾರು ಉದ್ಯೋಗ ಸೃಷ್ಟಿಯಲ್ಲಿ ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 24 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದ್ದು, ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ. ಈ ಮೂಲಕ ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳು ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನದಲ್ಲಿವೆ.

87 ಸಾವಿರಕ್ಕೂ ಅಧಿಕ ಹೊಸ ಜಾಬ್ ಕಾರ್ಡ್ ವಿತರಣೆ : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈಗಾಗಲೇ ವಿತರಿಸಲಾಗಿದ್ದ ಜಾಬ್ ಕಾರ್ಡ್‌ಗಳ ಇ-ಕೆವೈಸಿ ಪ್ರಕ್ರಿಯೆ ಕೈಗೊಳ್ಳುವುದರ ಜೊತೆಗೆ, ಜಾಬ್ ಕಾರ್ಡ್ ಮೇಳಗಳನ್ನು ಆಯೋಜಿಸಿ ಹೊಸ ಜಾಬ್ ಕಾರ್ಡ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

ಇದರಿಂದ ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದ ನೂರಾರು ಕುಟುಂಬಗಳಿಗೆ ತಮ್ಮ ಗ್ರಾಮಗಳಲ್ಲಿಯೇ ಕೆಲಸ ಪಡೆಯಲು ಅನುಕೂಲವಾಗಿದೆ. ಈ ವರ್ಷ ರಾಜ್ಯದಲ್ಲಿ ಹೊಸದಾಗಿ 87,164 ಜಾಬ್ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಮಳೆ ಕೊರತೆ ಹಾಗೂ ಕೃಷಿ ಚಟುವಟಿಕೆಗಳಲ್ಲಿನ ಅನಿಶ್ಚಿತತೆಯ ಸಂದರ್ಭದಲ್ಲಿ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಖಾತ್ರಿ ಯೋಜನೆ ಆರ್ಥಿಕ ಆಸರೆಯಾಗಿ ಪರಿಣಮಿಸಿದೆ.

Karnataka has generated a record 2.04 crore person-days of employment under the rural employment guarantee scheme from July 1 to October 14, according to Rural Development and Panchayat Raj Minister Eshwar B. Khandre. This is higher than the 1.71 crore person-days recorded during the corresponding period last year. Raichur district topped the state with 24 lakh person-days, followed by Bidar with 21 lakh and Koppal with 18 lakh. The state has also issued 87,164 new job cards this year, helping rural families access employment closer to home amid rainfall shortages.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror