ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ನಾಟಕದಲ್ಲಿ ಜುಲೈ 1 ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ 2 ಕೋಟಿ 4 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಕಳೆದ ವರ್ಷ ಇದೇ ಅವಧಿಯಲ್ಲಿ 1 ಕೋಟಿ 71 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿತ್ತು. ಈ ಬಾರಿ ಎಲ್ನಿನೋ ಪ್ರಭಾವದಿಂದ ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಬಡವರು, ದಲಿತರು, ವಂಚಿತ ವರ್ಗಗಳು ಹಾಗೂ ಭೂರಹಿತ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಉದ್ಯೋಗ ಸೃಷ್ಟಿಯಲ್ಲಿ ರಾಯಚೂರು ಜಿಲ್ಲೆಗೆ ಮೊದಲ ಸ್ಥಾನ : ರಾಜ್ಯದ ಜಿಲ್ಲಾವಾರು ಉದ್ಯೋಗ ಸೃಷ್ಟಿಯಲ್ಲಿ ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 24 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದ್ದು, ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ. ಈ ಮೂಲಕ ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳು ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನದಲ್ಲಿವೆ.
87 ಸಾವಿರಕ್ಕೂ ಅಧಿಕ ಹೊಸ ಜಾಬ್ ಕಾರ್ಡ್ ವಿತರಣೆ : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈಗಾಗಲೇ ವಿತರಿಸಲಾಗಿದ್ದ ಜಾಬ್ ಕಾರ್ಡ್ಗಳ ಇ-ಕೆವೈಸಿ ಪ್ರಕ್ರಿಯೆ ಕೈಗೊಳ್ಳುವುದರ ಜೊತೆಗೆ, ಜಾಬ್ ಕಾರ್ಡ್ ಮೇಳಗಳನ್ನು ಆಯೋಜಿಸಿ ಹೊಸ ಜಾಬ್ ಕಾರ್ಡ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಇದರಿಂದ ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದ ನೂರಾರು ಕುಟುಂಬಗಳಿಗೆ ತಮ್ಮ ಗ್ರಾಮಗಳಲ್ಲಿಯೇ ಕೆಲಸ ಪಡೆಯಲು ಅನುಕೂಲವಾಗಿದೆ. ಈ ವರ್ಷ ರಾಜ್ಯದಲ್ಲಿ ಹೊಸದಾಗಿ 87,164 ಜಾಬ್ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದು ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಮಳೆ ಕೊರತೆ ಹಾಗೂ ಕೃಷಿ ಚಟುವಟಿಕೆಗಳಲ್ಲಿನ ಅನಿಶ್ಚಿತತೆಯ ಸಂದರ್ಭದಲ್ಲಿ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಖಾತ್ರಿ ಯೋಜನೆ ಆರ್ಥಿಕ ಆಸರೆಯಾಗಿ ಪರಿಣಮಿಸಿದೆ.
Karnataka has generated a record 2.04 crore person-days of employment under the rural employment guarantee scheme from July 1 to October 14, according to Rural Development and Panchayat Raj Minister Eshwar B. Khandre. This is higher than the 1.71 crore person-days recorded during the corresponding period last year. Raichur district topped the state with 24 lakh person-days, followed by Bidar with 21 lakh and Koppal with 18 lakh. The state has also issued 87,164 new job cards this year, helping rural families access employment closer to home amid rainfall shortages.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…