2023-24ರ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಇನ್ನೇನು ಮಕ್ಕಳಿಗೆ ಪಾಠ-ಪ್ರವಚನಗಳು ಆರಂಭವಾಗಬೇಕು. ಆದರೆ ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣಿಸುತ್ತಿದೆ. ಇದು ಖಂಡಿತ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕೆಟ್ಟ ಪರಿಣಾಮಮ ಬೀರುತ್ತದೆ. ಆದರೆ ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಇನ್ನೂ ಮುಗಿಯದ ಹಿನ್ನೆಲೆ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಸದ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅತಿಥಿ ಶಿಕ್ಷಕರ ನೇಮಕಕ್ಕೆ ನಿರ್ಧರಿಸಲಾಗಿದೆ. ಅದರಂತೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರವನ್ನು ನೇಮಕ ಸರ್ಕಾರ ಮಾಡಲಿದೆ.
ಇದಕ್ಕೂ ಮುನ್ನ ಬಿಡುಗಡೆಯಾಗಿದ್ದ ತಾತ್ಕಾಲಿಕ ಪಟ್ಟಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ಹೀಗಾಗಿ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು.