ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

August 3, 2026
7:20 AM
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

ರಾಜ್ಯದ ಹಲವೆಡೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣಕನ್ನಡ, ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾಡಳಿತವು ಕೆಲವು ತಾಲೂಕುಗಳಲ್ಲಿ ಶಾಲೆ ಹಾಗೂ ಕಾಲೇಜುಗಳಿಗೆ ಸೋಮವಾರ (ಆಗಸ್ಟ್ 3) ರಜೆ ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆಯ ಮುನ್ಸೂಚನೆ ಹಾಗೂ ಜಿಲ್ಲಾಮಟ್ಟದ ಪರಿಸ್ಥಿತಿಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ರಜೆ ಘೋಷಿಸಲಾದ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಸಾಗರ ತಾಲೂಕುಗಳು, ಹಾಗೂ ಉತ್ತರಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಭಾರೀ ಮಳೆಯ ಪರಿಣಾಮ ಸಂಕಷ್ಟ ಎದುರಿಸುತ್ತಿದ್ದಾರೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ನೀರು ನಿಂತಿರುವ ಪ್ರದೇಶಗಳು, ನದಿ, ಹೊಳೆ, ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತವು ಎಚ್ಚರಿಕೆ ನೀಡಿದೆ.

ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ. ಹವಾಮಾನ ಪರಿಸ್ಥಿತಿಯನ್ನು ಅವಲಂಬಿಸಿ ಮುಂದಿನ ದಿನಗಳಲ್ಲಿಯೂ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾಡಳಿತವು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗದಂತೆ ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮನವಿ ಮಾಡಿದೆ.

Heavy rainfall across Karnataka has prompted district administrations to declare a holiday for schools and colleges in four districts/affected taluks on August 3 as a precautionary measure. Authorities have advised people to avoid rivers, waterlogged areas and the seashore until weather conditions improve

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror