Advertisement
ಸುದ್ದಿಗಳು

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Share

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 8 (ಬುಧವಾರ) ವಿವಿಧ ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿವೆ.

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಯಾವ ಜಿಲ್ಲೆಗಳಲ್ಲಿ ರಜೆ?

  • ದಕ್ಷಿಣ ಕನ್ನಡ ಜಿಲ್ಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ (IMD) ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜುಲೈ 9 ರಂದು (ಗುರುವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
  • ಕೊಡಗು ಜಿಲ್ಲೆ: ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
  • ಶಿವಮೊಗ್ಗ ಜಿಲ್ಲೆ: ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
  • ಬೆಳಗಾವಿ ಜಿಲ್ಲೆ: ಬೆಳಗಾವಿ, ನಿಪ್ಪಾಣಿ ಹಾಗೂ ಖಾನಾಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆಆಡಳಿತವು ಪೋಷಕರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆ ಮತ್ತು ಜಿಲ್ಲಾಡಳಿತದ ಅಧಿಕೃತ ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.

Heavy monsoon rains have prompted district administrations in Karnataka to declare a holiday on July 8, 2026, for schools and colleges in several rain-affected areas, including Kodagu, Sagara taluk of Shivamogga, and parts of Belagavi district, as a precautionary measure.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

16 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

16 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago