ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇಕಡ 4 ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆಯ ಮಳೆ 723 ಮಿಲಿ ಮೀಟರ್ ಇದ್ದು, ಈವರೆಗೆ 753 ಮಿಲಿ ಮೀಟರ್ ಮಳೆಯಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಶೇಕಡ 23ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇಕಡ 24ರಷ್ಟು ಕಡಿಮೆ ಮಳೆಯಾಗಿದ್ದು, ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು, ಬೆಳಗಾವಿ ಜಿಲ್ಲೆಗಳಲ್ಲಿ ಶೇಕಡ 20ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ತಿಳಿಸಿದರು. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸ್ವಲ್ಪ ಕಡಿಮೆಯಾಗಿದೆ. ಪ್ರಮುಖ ಜಲಾಶಯಗಳ ಗರಿಷ್ಠ ಸಾಮರ್ಥ್ಯ 892.62 ಟಿಎಂಸಿ , ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹವಿತ್ತು. ತುಂಗಭದ್ರಾ ಅಣೆಕಟ್ಟಿನ 32 ಕ್ರಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಕರೆದಿದ್ದು, ಅದರಲ್ಲಿ 8 ಗೇಟ್ ಗಳು ಅಳವಡಿಕೆಗೆ ಸಿದ್ಧವಿದೆ. ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಗಮನಹರಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

