Advertisement
MIRROR FOCUS

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಶೇ.4 ರಷ್ಟು ಹೆಚ್ಚು ಮಳೆ

Share

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ  ಶೇಕಡ 4 ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆಯ ಮಳೆ 723 ಮಿಲಿ ಮೀಟರ್ ಇದ್ದು,  ಈವರೆಗೆ 753 ಮಿಲಿ ಮೀಟರ್ ಮಳೆಯಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಶೇಕಡ 23ರಷ್ಟು  ಹೆಚ್ಚುವರಿ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇಕಡ 24ರಷ್ಟು ಕಡಿಮೆ ಮಳೆಯಾಗಿದ್ದು, ವಿಜಯಪುರ, ಗದಗ,  ಬಾಗಲಕೋಟೆ, ದಾವಣಗೆರೆ, ತುಮಕೂರು, ಬೆಳಗಾವಿ ಜಿಲ್ಲೆಗಳಲ್ಲಿ ಶೇಕಡ 20ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ತಿಳಿಸಿದರು. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸ್ವಲ್ಪ ಕಡಿಮೆಯಾಗಿದೆ. ಪ್ರಮುಖ ಜಲಾಶಯಗಳ ಗರಿಷ್ಠ ಸಾಮರ್ಥ್ಯ 892.62 ಟಿಎಂಸಿ , ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ  856.17 ಟಿಎಂಸಿ ಸಂಗ್ರಹವಿತ್ತು.  ತುಂಗಭದ್ರಾ ಅಣೆಕಟ್ಟಿನ  32 ಕ್ರಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಕರೆದಿದ್ದು, ಅದರಲ್ಲಿ 8 ಗೇಟ್ ಗಳು ಅಳವಡಿಕೆಗೆ ಸಿದ್ಧವಿದೆ. ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಗೆ  ಗಮನಹರಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

6 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

10 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

11 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

21 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

21 hours ago