Advertisement
ಸುದ್ದಿಗಳು

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

Share

ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್–2026ಗೆ ಕಾಪುವಿನ ಶ್ರೀ ಹಳೇ ಮಾರಿಯಮ್ಮ ಸಭಾಭವನದಲ್ಲಿ ಶನಿವಾರ ಚಾಲನೆ ದೊರೆಯಿತು. ಶ್ರೀ ನಾರಾಯಣಗುರು ಸ್ಪೋರ್ಟ್ಸ್ ಆ್ಯಂಡ್ ಎಜುಕೇಷನಲ್ ಟ್ರಸ್ಟ್ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಹಾಗೂ ಆಫಿಲಿಯನ್ಸ್ ಟೆಕ್ನಾಲಜಿ, ಮಂಗಳೂರು ಸಹಯೋಗದಲ್ಲಿ ಎರಡು ದಿನಗಳ ಈ ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ.

ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಳೆದ ಎರಡು ದಶಕಗಳಿಂದ ನಿರಂತರವಾಗಿ ಚೆಸ್ ಸ್ಪರ್ಧೆಗಳನ್ನು ಆಯೋಜಿಸುತ್ತಿರುವ ಸಂಸ್ಥೆಯ ಸೇವೆಯನ್ನು ಶ್ಲಾಘಿಸಿದರು. ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿರುವ ಕಾಪುವಿನಲ್ಲಿ ರಾಜ್ಯಮಟ್ಟದ ಚೆಸ್ ಚಾಂಪಿಯನ್‌ಶಿಪ್ ಆಯೋಜನೆಯಾಗಿರುವುದು ಹೆಮ್ಮೆಯ ವಿಷಯವಾಗಿದ್ದು, ಎಲ್ಲಾ ಸ್ಪರ್ಧಿಗಳು ಕ್ರೀಡಾ ಮನೋಭಾವದಿಂದ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದರು.

ಚೆಸ್ ಕಾಯಿ ಮುನ್ನಡೆಸಿದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಎಸ್. ಶೆಟ್ಟಿ, ಚೆಸ್ ಸ್ಪರ್ಧೆಗಳು ಮಕ್ಕಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ, ತಾರ್ಕಿಕ ಚಿಂತನೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಆರ್‌ಪಿಎಲ್‌ನ ಸಿಎಸ್‌ಆರ್ ಮ್ಯಾನೇಜರ್ ಮಂದಾರ ವಿ. ಕಾಳೆ, , ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರದೆ ಅವರ ಪ್ರತಿಭೆ, ಆಸಕ್ತಿ ಹಾಗೂ ಕನಸುಗಳಿಗೆ ಪೋಷಕರು ಮತ್ತು ಶಿಕ್ಷಕರು ಬೆಂಬಲ ನೀಡಬೇಕು ಎಂದು ಕರೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಡಾ. ವ್ಯಾಸರಾಜ ತಂತ್ರಿ, ಅಜಯ್ ಕುಮಾರ್ ಶೆಟ್ಟಿ, ಅವಿನಾಶ್ ಶೆಟ್ಟಿ, ಶ್ರೀಧರ ಶೆಣೈ, ಲೋಕೇಶ್ ಬೆಳ್ಚಡ ಹಾಗೂ ಮಾಧುರ್ಯ ಎಸ್.ಕೆ. ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್‌ನ ಸ್ಥಾಪಕ ಸಾಕ್ಷಾತ್ ಯು.ಕೆ. ಸ್ವಾಗತಿಸಿದರು. ಟ್ರಸ್ಟ್ ಅಧ್ಯಕ್ಷ ಉಮಾನಾಥ ಕಾಪು ವಂದಿಸಿದರು. ನಿರ್ದೇಶಕಿ ಸೌಂದರ್ಯ ಯು.ಕೆ. ಕಾರ್ಯಕ್ರಮ ನಿರೂಪಿಸಿದರು.

24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಎರಡು ದಿನಗಳ ಕಾಲ ನಡೆಯಲಿರುವ ಈ ಚಾಂಪಿಯನ್‌ಶಿಪ್‌ನಲ್ಲಿ 7, 9, 11, 13, 15 ಹಾಗೂ 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 400ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದಾರೆ.

ಪ್ರತಿ ವಿಭಾಗದಿಂದ ಇಬ್ಬರು ಬಾಲಕರು ಹಾಗೂ ಇಬ್ಬರು ಬಾಲಕಿಯರು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿದ್ದು, ಒಟ್ಟು 24 ಮಂದಿ ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯಲಿದ್ದಾರೆ. ಜೊತೆಗೆ ಆರು ವಿಭಾಗಗಳಲ್ಲಿ ಬಾಲಕ ಮತ್ತು ಬಾಲಕಿಯರಿಗೆ ತಲಾ ಹತ್ತು ಟ್ರೋಫಿಗಳಂತೆ ಒಟ್ಟು 120 ಟ್ರೋಫಿಗಳನ್ನು ವಿತರಿಸಲಾಗುವುದು ಎಂದು ಸಂಘಟಕ ಸಾಕ್ಷಾತ್ ಯು.ಕೆ. ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka State School Chess Championship 2026 began in Kapu with more than 400 students participating from across the state. Winners from each age category will qualify for the national-level championship, with a total of 24 players earning national berths.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

16 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

16 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

16 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

23 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago