ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

March 15, 2026
1:06 PM
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೇಸಿಗೆ ಮಳೆಯ ಚಟುವಟಿಕೆಗಳು ಮಾರ್ಚ್‌ 21ರವರೆಗೆ ಮುಂದುವರಿಯುವ ಸಾಧ್ಯತೆಗಳಿವೆ.

ಮಾರ್ಚ್‌ 16ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಬೇಸಿಗೆ ಮಳೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ.

ಕರಾವಳಿ ಭಾಗ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದ ವೇಳೆ ಬಿಸಿಲು–ಮೋಡ ಮಿಶ್ರ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈ ಬೇಸಿಗೆ ಮಳೆಯು ಮಾರ್ಚ್‌ 21ರವರೆಗೆ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ.

ಮಲೆನಾಡು ಭಾಗ :  ಕೊಡಗು ಜಿಲ್ಲೆಯಲ್ಲಿಯೂ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ಪ್ರದೇಶಗಳು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಸಂಜೆ–ರಾತ್ರಿ ವೇಳೆ ಮಳೆಯ ಲಕ್ಷಣಗಳು ಗೋಚರಿಸುತ್ತಿವೆ. ಈ ಭಾಗದಲ್ಲಿಯೂ ಬೇಸಿಗೆ ಮಳೆಯ ಚಟುವಟಿಕೆಗಳು ಮಾರ್ಚ್‌ 21ರವರೆಗೆ ಮುಂದುವರಿಯುವ ಸೂಚನೆಗಳು ಇವೆ.

Advertisement

ಉತ್ತರ ಒಳನಾಡು :  ನಿನ್ನೆ ಧಾರವಾಡದಲ್ಲಿ ಅನಿರೀಕ್ಷಿತ ಮಳೆಯಾಗಿದೆ. ಇವತ್ತು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಗಾಳಿಯ ಒತ್ತಡ ಹೆಚ್ಚಾದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡು :  ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ–ರಾತ್ರಿ ಮೋಡದ ವಾತಾವರಣ ಇರಲಿದೆ. ಇವತ್ತು ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ತಾಪಮಾನ ಏರಿಕೆಯಿಂದ ಮಾರ್ಚ್‌ 16ರಿಂದ ಒಂದೆರಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

Thunderstorms and scattered summer rains are likely across coastal, Malnad, and parts of north interior Karnataka till March 21. Rising temperatures may also trigger rainfall activity in select south interior districts from March 16 onwards.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror