2026-27ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಯನ್ನು ಖಚಿತಪಡಿಸಿಕೊಳ್ಳಲು ನವೆಂಬರ್ 18ರವರೆಗೆ ಅವಕಾಶ ನೀಡಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಇದೀಗ ಈ ಗಡುವನ್ನು ಮಾರ್ಪಡಿಸಿ ಶಾಲಾ ಶಿಕ್ಷಣ ಇಲಾಖೆ ಹೊಸ ದಿನಾಂಕಗಳನ್ನು ಪ್ರಕಟಿಸಿದೆ.
2026-27ನೇ ಸಾಲಿನ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆಗಸ್ಟ್ 11 ಮತ್ತು 12ರಂದು ಜಿಲ್ಲಾವಾರು ಹಾಗೂ ವಿಭಾಗವಾರು ಅಧಿಸೂಚನೆಗಳನ್ನು ಹೊರಡಿಸಿ, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಿರುವುದರಿಂದ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ


