Advertisement
ಸುದ್ದಿಗಳು

ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಗೆ ನ.16ರವರೆಗೆ ಅವಧಿ ವಿಸ್ತರಣೆ

Share

2026-27ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಯನ್ನು ಖಚಿತಪಡಿಸಿಕೊಳ್ಳಲು ನವೆಂಬರ್ 18ರವರೆಗೆ ಅವಕಾಶ ನೀಡಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಇದೀಗ ಈ ಗಡುವನ್ನು ಮಾರ್ಪಡಿಸಿ ಶಾಲಾ ಶಿಕ್ಷಣ ಇಲಾಖೆ ಹೊಸ ದಿನಾಂಕಗಳನ್ನು ಪ್ರಕಟಿಸಿದೆ.

2026-27ನೇ ಸಾಲಿನ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆಗಸ್ಟ್ 11 ಮತ್ತು 12ರಂದು ಜಿಲ್ಲಾವಾರು ಹಾಗೂ ವಿಭಾಗವಾರು ಅಧಿಸೂಚನೆಗಳನ್ನು ಹೊರಡಿಸಿ, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಅರ್ಜಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಿರುವುದರಿಂದ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ಅ.31ರಂದು ಉದ್ಯೋಗ ಮೇಳ : ಫೋರ್ಸ್ ಕಂಪನಿಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಫೋರ್ಸ್‌ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 31ರಂದು ಪಡೀಲ್‌ನ ಜಿಲ್ಲಾ ಉದ್ಯೋಗ…

17 minutes ago

ಅಡಿಕೆ ಸಂಶೋಧನೆಗೆ ರಾಷ್ಟ್ರೀಯ ಮನ್ನಣೆ – 2027ರಲ್ಲಿ ಅಂತರರಾಷ್ಟ್ರೀಯ ಅಡಿಕೆ ಸಮ್ಮೇಳನಕ್ಕೆ ಚಿಂತನೆ

ARDF ಸಭೆಯಲ್ಲಿ ಈ ವರ್ಷ ಡಿಆರ್‌ಐ ಮತ್ತು ಸುಂಕ ಇಲಾಖೆಯಿಂದ 34 ಅಡಿಕೆ…

26 minutes ago

ಹವಾಮಾನ ವರದಿ | 28-10-2026 | ಕರ್ನಾಟಕದಲ್ಲಿ ಸದ್ಯ ಒಣಹವೆ – ನವೆಂಬರ್ 2ರಿಂದ ಮತ್ತೆ ಮಳೆ ಸಾಧ್ಯತೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕಲಬುರ್ಗಿ, ಬೀದರ್ ಮತ್ತು ಯಾದಗಿರಿಯಲ್ಲಿ…

17 hours ago

ಅಡಿಕೆ ಆರೋಗ್ಯ ಸಂಶೋಧನೆಗೆ ಅಪಾರ ಅವಕಾಶ – ಕೋಕೋ ಕೃಷಿಯಲ್ಲೂ ಭಾರತಕ್ಕೆ ಭವಿಷ್ಯ – ಡಾ. ಬಾಲಚಂದ್ರ ಹೆಬ್ಬಾರ್

ಅಡಿಕೆಯ ಆರೋಗ್ಯ ಸಂಬಂಧಿತ ಸಾಧ್ಯತೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಹೆಚ್ಚಿನ ಸಂಶೋಧನೆ ಅಗತ್ಯವಿದೆ…

1 day ago

ಮಾನವ–ಕಾಡಾನೆ ಸಂಘರ್ಷ ತಡೆಗೆ ಹೊಸ ಯೋಜನೆಗಳು

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ತ್ಯಾಗದಬಾಗಿಲು ಗ್ರಾಮ ವ್ಯಾಪ್ತಿಯಲ್ಲಿ 500 ಎಕರೆ ಪ್ರದೇಶದಲ್ಲಿ…

1 day ago

ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ

ಅಡಿಕೆ ಕೃಷಿಯಲ್ಲಿನ ರೋಗಬಾಧೆ ಮತ್ತು ಮಾರುಕಟ್ಟೆ ಅನಿಶ್ಚಿತತೆಯನ್ನು ಎದುರಿಸಲು ಬೆಳೆಗಾರರು ಮಿಶ್ರ ಬೆಳೆ…

2 days ago