ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

April 14, 2026
6:07 PM
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 40 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ ಹಗುರ ಮಳೆಯಾಗಿದ್ದು, ಕೆಲವೆಡೆ ತಾತ್ಕಾಲಿಕ ತಂಪು ಅನುಭವವಾದರೂ, ಮುಂದಿನ ದಿನಗಳಲ್ಲಿ ಮತ್ತೆ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.  ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್.ಪಾಟೀಲ್ ಅವರು ಮಾಹಿತಿ ನೀಡಿ, ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನ ಏರಿಕೆಯ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕಲಬುರಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಇದೇ ವೇಳೆ ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ತಲಾ 40 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜನರು ಬಿಸಿಗಾಳಿಗೆ ತೊಂದರೆ ಅನುಭವಿಸುತ್ತಿದ್ದಾರೆ.

ಹೀಗಾಗಿ, ಮುಂದಿನ ದಿನಗಳಲ್ಲಿ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Meteorological Department has warned of a significant rise in temperatures across North and South Interior Karnataka over the next five days. While light rainfall is expected in some regions, several districts like Kalaburagi have already recorded temperatures above 40°C, indicating intensifying summer conditions.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror