Advertisement
ಸುದ್ದಿಗಳು

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

Share

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದ ವಿವಿಧ ಭಾಗಗಳಲ್ಲಿ ಬೇಸಿಗೆ ಮಳೆಯ ಚಟುವಟಿಕೆ ಮುಂದುವರಿದಿದ್ದು, ಮಾರ್ಚ್‌ 26ರ ಬೆಳಿಗ್ಗೆ 8 ಗಂಟೆಯವರೆಗೆ ಹಲವೆಡೆ ಮಧ್ಯಾಹ್ನ ನಂತರ ಹಾಗೂ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲ ಭಾಗಗಳಲ್ಲಿ ಸಾಮಾನ್ಯ ಮಳೆಯೂ ಸಂಭವಿಸುವ ಸಾಧ್ಯತೆ ಇದೆ.

ಕರಾವಳಿ ಭಾಗ

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮುಂದಿನ ಒಂದೆರಡು ದಿನ ಮಳೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿದ್ದರೂ, ಏಪ್ರಿಲ್‌ 4 ಅಥವಾ 5ರವರೆಗೆ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು ಭಾಗ

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಈ ಬೇಸಿಗೆ ಮಳೆ ಏಪ್ರಿಲ್‌ ಮೊದಲ ವಾರದವರೆಗೂ ಮುಂದುವರಿಯಬಹುದು.

ಉತ್ತರ ಒಳನಾಡು

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದರೆ ಮಳೆಯಾಗುವ ಲಕ್ಷಣಗಳಿವೆ. ಮಧ್ಯಮ ಸ್ತರದಲ್ಲಿ ಉತ್ತರ ಕರ್ನಾಟಕ ಹಾಗೂ ಮಧ್ಯ ಭಾರತದಲ್ಲಿ ಪ್ರತ್ಯಾವರ್ತ ಮಾರುತಗಳ ಚಲನೆಯಿಂದ ಉತ್ತರ ಕರ್ನಾಟಕದಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು

ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಾರ್ಚ್‌ 28ರ ನಂತರ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲೂ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago