ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ವಿತರಿಸಲಾಗುತ್ತದೆ.ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರಿಗೆ ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದೆ.ಇದಕ್ಕಾಗಿ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಡಿಸೆಂಬರ್ 1ರಿಂದ ಕುಚಲಕ್ಕಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಕುಚಲಕ್ಕಿ ಅವಶ್ಯಕತೆ ಇದೆ ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel