ಯುಗಾದಿ ಹಬ್ಬಕ್ಕೆ ಬಸ್ಸಲ್ಲಿ ಊರಿಗೆ ಹೊಗುವವರಿಗೆ ಶಾಕ್! ಬಂದ್ ಆಗುತ್ತಾ ಬಸ್ ಸಂಚಾರ?

March 15, 2023
12:08 PM

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸರ್ಕಾರಿ ನೌಕರರು ರಾಜ್ಯ ಸರ್ಕಾರಕ್ಕೆ  ಮುಷ್ಕರದ ಬಿಸಿ ಮುಟ್ಟಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಬಳಿಕ ಇದೀಗ ಸಾರಿಗೆ ಸಿಬ್ಬಂದಿ  ಸಹ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಸಾರಿಗೆ ನೌಕರರ ಅಧ್ಯಕ್ಷ ಹೆಚ್.ವಿ.ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಂಬಳ ಹೆಚ್ಚಳ ಮಾಡದ ಹಿನ್ನೆಲೆ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಮಾರ್ಚ್ 21ರಿಂದ ಮುಷ್ಕರಕ್ಕೆ ಸಾರಿಗೆ ನೌಕರರು ಕರೆ ನೀಡಿದ್ದಾರೆ. ಸುಮಾರು 23 ಸಾವಿರಕ್ಕೂ ಬಸ್ಗಳ ಸಂಚಾರ ಸ್ಥಗಿತವಾಗಲಿದೆ.

Advertisement

ಇತ್ತ ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಮಾರ್ಚ್ 24ರಿಂದ ಮುಷ್ಕರಕ್ಕೆ ಕರೆ ನೀಡಿದೆ. ನೌಕರರ ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್ ನೌಕರರ ಸಮಾನ ಮನಸ್ಕರ ವೇದಿಕೆಯು ಮಾರ್ಚ್ 5ರಂದೇ ಸಭೆ ನಡೆಸಿ ಮುಷ್ಕರಕ್ಕೆ ಕರೆ ನೀಡಿತ್ತು.

ಎರಡೂ ಬಣಗಳಿಂದಲೂ ಮುಷ್ಕರಕ್ಕೆ ಕರೆ

ಎರಡೂ ಬಣಗಳು ಪ್ರತ್ಯೇಕವಾಗಿ ಕರೆ ನೀಡಿರುವುದು ನೌಕರರಲ್ಲಿ ಗೊಂದಲ ಉಂಟು ಮಾಡಿದೆ. ಎರಡೂ ಬಣದ ಬೇಡಿಕೆಗಳು ಭಿನ್ನವಾಗಿರುವುದು ಒಗ್ಗಟ್ಟಿನ ಹೋರಾಟಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿವೆ. ಯುಗಾದಿ ಮುನ್ನಾ ದಿನವೇ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಹಬ್ಬಕ್ಕೆ ದೂರದ ಊರುಗಳಿಗೆ ತೆರುಳವವರಿಗೆ ತೊಂದರೆ ಉಂಟಾಗುವ ಸಾಧ್ಯತೆಗಳಿವೆ.

ಸಾರಿಗೆ ನೌಕರರ ಬೇಡಿಕೆಗಳೇನು?

Advertisement

1.ಮೂಲ ವೇತನಕ್ಕೆ ಬಿಡಿಎ ವಿಲೀನಗೊಳಿಸಿ ಶೇ.25ರಷ್ಟು ಸಂಬಳ ಹೆಚ್ಚಳ ಮಾಡಬೇಕು.

2.ವೇತನ ಹೆಚ್ಚಳ ಪರಿಷ್ಕೃತ ಮೂಲ ವೇತನದ ಶೇ.3ರಷ್ಟಿರಬೇಕು.

3.ಆಯ್ಕೆ ಶ್ರೇಣಿಯ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಗಳಿಗೊಮ್ಮೆ ನೀಡಬೇಕು.

4.ಆಯ್ಕೆ ಶ್ರೇಣಿ ಬಡ್ತಿ ಮತ್ತು ಉನ್ನತ ಶ್ರೇಣಿಗಳ ವೇತನ ಶ್ರೇಣಿಯು ಸಹ ಪರಿಷ್ಕೃತ ಮೂಲ ವೇತನದ ಶೇ.3ರಷ್ಟಿರಬೇಕು.

5.ಎಲ್ಲಾ ನೌಕರರ ಬಾಟಾ ಭತ್ಯೆ ಐದು ಪಟ್ಟು ಹೆಚ್ಚಳ ಮಾಡಬೇಕು. ಬಾಟಾದಲ್ಲಿ ಕ್ಯಾಶ್ ರಿಪಾಸ್ಟ್​, ಬಟ್ಟೆ ತೊಳೆಯುವ ಮತ್ತು ರಾತ್ರಿ ಪಾಳಿಯ ಪ್ರೋತ್ಸಾಹ ಭತ್ಯೆ ಒಳಗೊಂಡಿರುತ್ತದೆ,

Advertisement

6.ಎಲ್ಲಾ ನಿರ್ವಾಹಕರಿಗೂ ಕ್ಯಾಪಿಯರ್​ಗಳಿಗೆ ಸಮಾನದ ಪ್ರೋತ್ಸಾಹ ಧನ ನೀಡಬೇಕು.

7.2021ರ ಮುಷ್ಕರದ ವೇಳೆ ಅಮಾನತುಗೊಂಡಿರುವ ಸಿಬ್ಬಂದಿಯನ್ನು ಯಾವುದೇ ಷರತ್ತುಗಳಿಲ್ಲದೇ ಮರು ನೇಮಕ ಮಾಡಿಕೊಳ್ಳಬೇಕು.

8.ಮುಷ್ಕರದ ವೇಳೆ ಸಿಬ್ಬಂದಿ ಮೇಲೆ ದಾಖಲಾಗಿರುವ ಎಫ್​ಐಆರ್​ಗಳನ್ನು ರದ್ದುಪಡಿಸಬೇಕು.

9.ವರ್ಗಾವಣೆ ಶಿಕ್ಷೆಗೆ ಒಳಗಾಗಿರುವ ಸಿಬ್ಬಂದಿಯನ್ನ ಮೂಲ ಘಟಕಕ್ಕೆ ನಿಯೋಜಿಸಬೇಕು.

10.ಜಂಟಿ ಕ್ರಿಯಾ ಸಮಿತಿ ಸಲ್ಲಿಸಿರುವ ಎಲ್ಲಾ ಬೇಡಿಕೆಗಳನ್ನು ಚರ್ಚಿಸಿ ವಿಳಂಬವಿಲ್ಲದೇ ಈಡೇರಿಸಬೇಕು.

Advertisement

ಅನಂತ್ ಸುಬ್ಬರಾವ್ ಅಸಮಾಧಾನ

ಈ ಹಿಂದೆ ನಡೆದ ಹಲವು ಸಭೆಗಳಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಶ್ರೀರಾಮುಲು ನಮ್ಮ ಬೇಡಿಕೆಗಳನ್ನು ಈಡೇರಿಸೋದಾಗಿ ಹೇಳಿದ್ದರು. ಆದ್ರೆ ಈವರೆಗೂ ನಮ್ಮ ಯಾವುದೇ ಬೇಡಿಕೆಗಳು ಈಡೇರಿಲ್ಲ. ಸರ್ಕಾರಿ ನೌಕರರು ಪ್ರತಿಭಟನೆ ಮಾಡಿದ ವೇಳೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸಿಎಂ ಆದೇಶ ಹೊರಡಿಸಿದರು. ಆದ್ರೆ ನಮ್ಮ ಬೇಡಿಕೆಗಳನ್ನು ಮಾತ್ರ ಸರ್ಕಾರ ಈಡೇರಿಸುತ್ತಿಲ್ಲ ಎಂದು ಅನಂತ್ ಸುಬ್ಬರಾವ್ ಅಸಮಾಧಾನ ಹೊರ ಹಾಕಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group