ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

March 24, 2026
7:12 AM
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ ಸಂಘರ್ಷ ತಡೆ ಹಾಗೂ ಪಡಿತರ ಕಾಳಸಂತೆ ನಿಯಂತ್ರಣಕ್ಕೂ ಹಲವು ಹೊಸ ಕ್ರಮಗಳನ್ನು ಘೋಷಿಸಲಾಗಿದೆ.

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 4 ಸಾವಿರ ಹುದ್ದೆಗಳು ಖಾಲಿ ಇದ್ದು, ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಳಿದ 3 ಸಾವಿರ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಹುದ್ದೆಗಳ ಭರ್ತಿಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಮಾನವ–ಪ್ರಾಣಿ ಸಂಘರ್ಷ ತಡೆಗೆ ಹೆಚ್ಚುವರಿ ಆನೆ ಕಾರ್ಯಪಡೆ :  ಕಾಡಂಚಿನ ಜಮೀನುಗಳಿಗೆ ಕಾಡಾನೆಗಳು ದಾಳಿ ಮಾಡಿ ಬೆಳೆ ಹಾನಿ ಮಾಡುತ್ತಿರುವುದನ್ನು ತಡೆಯಲು ಹೆಚ್ಚುವರಿ ಆನೆ ಕಾರ್ಯಪಡೆ ರಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸದಸ್ಯ ಎಸ್. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಮನಗರ ವಿಭಾಗ ಹಾಗೂ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವಿಭಾಗ ಸೇರಿ 65.601 ಕಿ.ಮೀ. ರೈಲ್ವೇ ಬ್ಯಾರಿಕೇಡ್, 122.035 ಕಿ.ಮೀ. ಸೋಲಾರ್ ತಂತಿಬೇಲಿ ಹಾಗೂ 31.08 ಕಿ.ಮೀ. ಆನೆ ತಡೆ ಕಂದಕ ನಿರ್ಮಿಸಲಾಗಿದೆ ಎಂದು ಹೇಳಿದರು. ಜೀವಕ್ಕೆ ಅಪಾಯ ಉಂಟುಮಾಡುವ ಆನೆಗಳನ್ನು ಮಾತ್ರ ಹಿಡಿಯುವ ಅವಕಾಶವಿದೆ ಎಂದರು.

ನ್ಯಾಯಬೆಲೆ ಅಂಗಡಿಗಳಿಗೆ ಸಿಸಿ ಟಿವಿ – ಪಡಿತರ ಕಾಳಸಂತೆ ತಡೆಗೆ ಕ್ರಮ :  ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಸಿಸಿ ಟಿವಿ ಅಳವಡಿಕೆ ಮಾಡುವ ಮೂಲಕ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಡಿತರ ಸರಬರಾಜು ವಾಹನಗಳಿಗೆ ಜಿಪಿಎಸ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿಗೆ ತರಲಾಗುವುದು. ಜೊತೆಗೆ ಕಾಳಸಂತೆ ತಡೆಯಲು ನಿಗಾವಹಿಸುವ ಕಮಾಂಡ್ ಸೆಂಟರ್ ತೆರೆಯಲಾಗುವುದು ಎಂದು ಹೇಳಿದರು.

The Karnataka government has initiated steps to fill 1,000 out of 4,000 vacant posts in state universities, with the remaining positions to be filled in phases. The government also announced additional elephant task forces to prevent crop damage and measures like CCTV installation and GPS tracking to curb black-marketing of ration rice.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror