Karnataka Weather | 06-04-2024 | ಇಂದಿನಿಂದ ಬೇಸಗೆ ಮಳೆಯ ಲಕ್ಷಣ | ಇಂದು ಹಲವು ಕಡೆ ಮಳೆ ಸಾಧ್ಯತೆ |

April 6, 2024
11:52 AM
ಇವತ್ತಿನಿಂದ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ. ಎಪ್ರಿಲ್ 9 ರಿಂದ ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

07.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಭಾಗದಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಇವತ್ತಿನಿಂದ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ. ಎಪ್ರಿಲ್ 9 ರಿಂದ ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror