07.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಭಾಗದಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಇವತ್ತಿನಿಂದ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ. ಎಪ್ರಿಲ್ 9 ರಿಂದ ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ…
₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ…
ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಜೊತೆ ಜೋಡಿಸುವ ಗುರಿಯನ್ನು…
ಕರಾವಳಿ ಮತ್ತು ಮಲೆನಾಡಿನಲ್ಲಿ ನವೆಂಬರ್ 8ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ…
ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ…
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…