Karnataka Weather | 11-04-2024 | ಮಳೆ ಯಾವಾಗ … ಮಳೆ ಯಾವಾಗ ….? | ಸದ್ಯ ಅನಿರೀಕ್ಷಿತ ಮಳೆಯಾದರೂ ಆದೀತು… |

April 11, 2024
11:55 AM
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಮೊದಲು ಎ. 12 ಹಾಗೂ 13ರಂದು ಕೊಡಗು, ಹಾಸನ, ಚಿಕ್ಕಮಗಳೂರಿನ ಅಲ್ಲಲ್ಲಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

12.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ವಾತಾವರಣದ ತೇವಾಂಶ ಕಡಿಮೆಯಾಗಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಕೊಡಗು, ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಅಲ್ಲಲ್ಲಿ ಮೋಡ ಅಥವಾ ತುಂತುರು ತುಂತುರು ಮಳೆಯ ಮುನ್ಸೂಚನೆ ಇದೆ.ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮೇಲಿನ ನಕ್ಷೆಯಲ್ಲಿ ಗುರುತಿಸಿದ ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. ಸಂಜೆಯ ವೇಳೆಗೆ ಪೂರ್ವ ಹಾಗೂ ಪಶ್ಚಿಮದ ಗಾಳಿಯೂ ಸಂಧಿಸುವ ಕಾರಣದಿಂದ ಒತ್ತಡ ಹೆಚ್ಚಾಗಿ ಮಳೆಯ ವಾತಾವರಣ ಸೃಷ್ಟಿಯಾಗಿದೆ. ಈ ಪ್ರಕ್ರಿಯೆಯೂ ಎಪ್ರಿಲ್ 14ರ ನಂತರ ಕಡಿಮೆಯಾಗಲಿದ್ದು, ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಮೊದಲು ಎ. 12 ಹಾಗೂ 13ರಂದು ಕೊಡಗು, ಹಾಸನ, ಚಿಕ್ಕಮಗಳೂರಿನ ಅಲ್ಲಲ್ಲಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror