12.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ವಾತಾವರಣದ ತೇವಾಂಶ ಕಡಿಮೆಯಾಗಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಕೊಡಗು, ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಅಲ್ಲಲ್ಲಿ ಮೋಡ ಅಥವಾ ತುಂತುರು ತುಂತುರು ಮಳೆಯ ಮುನ್ಸೂಚನೆ ಇದೆ.ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮೇಲಿನ ನಕ್ಷೆಯಲ್ಲಿ ಗುರುತಿಸಿದ ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. ಸಂಜೆಯ ವೇಳೆಗೆ ಪೂರ್ವ ಹಾಗೂ ಪಶ್ಚಿಮದ ಗಾಳಿಯೂ ಸಂಧಿಸುವ ಕಾರಣದಿಂದ ಒತ್ತಡ ಹೆಚ್ಚಾಗಿ ಮಳೆಯ ವಾತಾವರಣ ಸೃಷ್ಟಿಯಾಗಿದೆ. ಈ ಪ್ರಕ್ರಿಯೆಯೂ ಎಪ್ರಿಲ್ 14ರ ನಂತರ ಕಡಿಮೆಯಾಗಲಿದ್ದು, ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಮೊದಲು ಎ. 12 ಹಾಗೂ 13ರಂದು ಕೊಡಗು, ಹಾಸನ, ಚಿಕ್ಕಮಗಳೂರಿನ ಅಲ್ಲಲ್ಲಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?