Karnataka Weather | 12-04-2024 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಅಂತೂ ಮುಂದಿನ ವಾರದಿಂದ ಮಳೆ ನಿರೀಕ್ಷೆ |

April 12, 2024
1:32 PM
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ, ಕೆಲವು ಭಾಗಗಳಲ್ಲಿ ತುಂತುರು ಮಳೆ ಇರಬಹುದು.

13.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ (ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಜಾಸ್ತಿ ಇರಬಹುದು) ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಕರಾವಳಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ. ಆಮೇಲೆ ಕಡಿಮೆಯಾದರೂ ಎಪ್ರಿಲ್ 18ರಿಂದ ಮತ್ತೆ ಉತ್ತಮ ಮಳೆಯ ಮುನ್ಸೂಚನೆ ಇದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror