13.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ (ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಜಾಸ್ತಿ ಇರಬಹುದು) ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಕರಾವಳಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ. ಆಮೇಲೆ ಕಡಿಮೆಯಾದರೂ ಎಪ್ರಿಲ್ 18ರಿಂದ ಮತ್ತೆ ಉತ್ತಮ ಮಳೆಯ ಮುನ್ಸೂಚನೆ ಇದೆ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…