15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಇವತ್ತು ಹಾಗೂ ನಾಳೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಪ್ರಿಲ್ 16 ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆ ಮೇಲಿನ ದಿನಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ಎಪ್ರಿಲ್ 20 ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…