18.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕೊಡಗು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಗುಲ್ಬರ್ಗ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಆದರೆ, ಇವತ್ತು ಈಗಾಗಲೇ ಮುಂಜಾನೆಯಿಂದ ರಾಜ್ಯದ ಅಲ್ಲಲ್ಲಿ ಬಿಳಿ ಮೋಡದ ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. ಈಗಿನಂತೆ ಎಪ್ರಿಲ್ 18 ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…
ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…
2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…