19.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನಂತೆ ಎಪ್ರಿಲ್ 20ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಮುಂದಿನ ದಿನಗಳಲ್ಲಿ ಬದಲಾಗುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಎಪ್ರಿಲ್ 18, 19ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಆಮೇಲೆ ಮಳೆ ಕ್ಷೀಣಿಸುವ ಲಕ್ಷಣಗಳಿವೆ.