Advertisement
ವೆದರ್ ಮಿರರ್

Karnataka Weather | 18-04-2024 | ಹಲವು ಕಡೆ ಮಳೆಯ ಸೂಚನೆ ಇದೆ….,ಆದರೆ ಮಳೆಯಾಗುತ್ತಾ…? | ಹಾಗಾದರೆ ಮಳೆ ಯಾವಾಗ..?

Share

19.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನಂತೆ ಎಪ್ರಿಲ್ 20ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಮುಂದಿನ ದಿನಗಳಲ್ಲಿ ಬದಲಾಗುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಎಪ್ರಿಲ್ 18, 19ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಆಮೇಲೆ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

8 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

24 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago