Karnataka Weather | 21-04-2024 | ರಾಜ್ಯದ ಕೆಲವು ಕಡೆ ಮಳೆಯ ಲಕ್ಷಣ ಇದೆ |

April 21, 2024
11:56 AM
ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

22.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಹಾಗೂ ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಾಗಲೇ ಮಳೆಯ ತೀವ್ರತೆ ಕಡಿಯಾಗಲಿದ್ದು, ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಂತಹ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ.ತೀವ್ರ ಉಷ್ಣಾಂಶ ಏರಿಕೆಯಿಂದಾಗಿ ಪರಿಸ್ಥಿತಿ ಬದಲಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror