21.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ರಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಹಾಗೂ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಮಾರ್ಚ್ 21ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 23ರ ನಂತರ ಮಳೆ ಕಡಿಮೆಯಾದರೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮತ್ತೆರಡು ದಿನ ಮಳೆ ಮುಂದುವರಿಯುವ ಲಕ್ಷಣಗಳಿವೆ.