Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |

April 23, 2024
11:31 AM
ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ.

24.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಶಿವಮೊಗ್ಗ – ಉತ್ತರ ಕನ್ನಡ ಗಡಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ( ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ)

ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಉಳಿದ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ, ಚಿತ್ರದುರ್ಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.

ಈಗಿನಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror