24.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಶಿವಮೊಗ್ಗ – ಉತ್ತರ ಕನ್ನಡ ಗಡಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ( ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ)
ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಉಳಿದ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ, ಚಿತ್ರದುರ್ಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…