28.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು ಸಂಜೆ, ರಾತ್ರಿ ಮೋಡ ಸ್ವಲ್ಪ ಜಾಸ್ತಿ ಇದ್ಧರೂ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ.ರಾಜ್ಯದ ಉಳಿದ ಭಾಗಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಮುದ್ರದ ಭಾಗದಿಂದ ( ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ) ಭೂಮಿಯ ಕಡೆಗೆ ಬೀಸುವ ಗಾಳಿಯ ಒತ್ತಡ ತುಂಬಾ ಕಡಿಮೆ ಇರುವುದರಿಂದ ವಾತಾವರಣದಲ್ಲಿ ಬಿಸಿ ಗಾಳಿಯ ಪ್ರಭಾವ ಮುಂದಿನ 4 ದಿನಗಳ ಕಾಲ ಹೆಚ್ಚಿರುವ ಸಾಧ್ಯತೆ ಇದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…