01.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪು ರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮೇ 6ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …