05.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಮೋಡ ಹಾಗೂ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.ನಿನ್ನೆಯಿಂದ ಕರ್ನಾಟಕದ ದಕ್ಷಿಣ ಒಳನಾಡು, ಕೊಡಗು, ದಕ್ಷಿಣ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಸಾಮಾನ್ಯ ಸ್ಥಿತಿಗೆ ತಲುಪಿದೆ.
ಈಗಿನಂತೆ ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ ಪೂರ್ವ ಮುಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಮೇ 7 ಅಥವಾ 8ರಿಂದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.