Karnataka Weather | 09-05-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ |

May 9, 2024
12:10 PM
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

10.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಮೋಡ ಮಾತ್ರ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ( ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ) ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಲವಾಗಿದ್ದರೆ ಮಂಡ್ಯ, ರಾಮನಗರ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror